ಹೊನ್ನಹಳ್ಳಿ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

29chn-1 honnahalali gra.pa
Published on

ಚಾಮರಾಜನಗರ: ತಾಲೂಕಿನ ಹೊನ್ನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರ ಮತ್ತೆ ಬಿಜೆಪಿ ಬೆಂಬಲಿಗರ ಪಾಲಾಗಿದ್ದು, ಅಧ್ಯಕ್ಷರಾಗಿ ಎನ್.ರವಿಕುಮಾರ್, ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾದರು.

ಮಲ್ಲೇಶ್, ಶಿವಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣಾ ಪ್ರಕ್ರಿಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಎನ್.ರವಿಕುಮಾರ್, ಕಾಂಗ್ರೆಸ್‌ನಿಂದ ಚನ್ನಪ್ಪನಪುರ ಪ್ರಸಾದ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಜುಳಾ, ಮಂಗಳಮ್ಮ ಸ್ಪರ್ಧೆ ಮಾಡಿದ್ದರು. 14 ಸದಸ್ಯ ಬಲದಲ್ಲಿ ಸಭೆಗೆ 12 ಸದಸ್ಯರು ಹಾಜರಿದ್ದು, ಇಬ್ಬರು ಗೈರಾಗಿದ್ದರು. ಬಳಿಕ ಮತದಾನ ನಡೆದು ಎನ್. ರವಿಕುಮಾರ್ ಹಾಗೂ ಮಂಜುಳಾ ತಲಾ 7 ಮತ ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆಯಾದರೆ, ಪ್ರಸಾದ್ ಮತ್ತು ಮಂಗಳಮ್ಮ ಐದು ಮತ ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ವಿಶ್ವನಾಥ್ ಘೋಷಿಸಿದರು.

ಬಿಜೆಪಿ ಬೆಂಬಲಿಗರು ಆಯ್ಕೆಯಾಗುತ್ತಿದ್ದಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ವೃಷಬೇಂದ್ರಪ್ಪ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಗ್ರಾಪಂ ಸದಸ್ಯರಾದ ಅಮೃತ, ಶಿವಮ್ಮ, ದೇವಶೆಟ್ಟಿ, ಸುಂದ್ರಮ್ಮ, ಶಂಕರಗುರು, ಕಾಂತರಾಜು, ಮಹದೇವಮ್ಮ ಹಾಗೂ ಪಿಡಿಓ ಲಕ್ಷ್ಮಣನಾಯಕ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net