ನಾಳೆ ಮೂವರು ಸಚಿವರ ಜಿಲ್ಲಾ ಪ್ರವಾಸ

18CHN4 JILLADALITHA BAVAN
Published on

ಚಾಮರಾಜನಗರ: ಚಾಮರಾಜನಗರಕ್ಕೆ ಜು.5ರಂದು ಮೂವರು ಸಚಿವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಪಶುಸಂಗೋಪನೆ ಮತ್ತು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್ ಸುರೇಶ, ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಬೆಳಗ್ಗೆ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರ ಅಭಿವೃದ್ಧಿ ಇಲಾಖೆ ಸಂಬಂಧಪಟ್ಟಂತೆ ನಗರ ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಕೆ ಯು ಐ ಡಿ ಎಫ್ ಸಿ ಹಾಗೂ ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರದಿಂದ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವ ರಹೀಂಖಾನ್ ಮಧ್ಯಾಹ್ನ 1.30 ರಿಂದ 2.30 ಗಂಟೆಯವರೆಗೆ ಚಾಮರಾಜನಗರದ ಇಂದಿರಾ ಕ್ಯಾಂಟೀನ್ ಹಾಗೂ ಘನ ತ್ಯಾಜ್ಯ ನಿರ್ವಹಣಾ ಘಟಕದ ಸ್ಥಳ ಪರಿಶೀಲನೆ ನಡೆಸುವರು. 3 ಗಂಟೆಗೆ ಚಾಮರಾಜನಗರದಿಂದ ತೆರಳುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net