ಕೆಆರ್‌ಎಸ್ ಪಕ್ಷದ ನೂತನ ಪದಾಧಿಕಾರಗಳ ಆಯ್ಕೆ

057
Published on

ಚಾಮರಾಜನಗರ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ(ಕೆಆರ್‌ಎಸ್) ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ವಕೀಲ ರವಿಕುಮಾರ್ ಮಾಹಿತಿ ನೀಡಿದರು.

ಕೆಆರ್‌ಎಸ್ ಪಕ್ಷದ ಹಿಂದಿನ ಜಿಲ್ಲಾಧ್ಯಕ್ಷರಾಗಿದ್ದ ಶ್ರೀನಿವಾಸ್ ಶಾಸಿ ಅವರನ್ನು ರಾಜ್ಯ ಜಂಟಿ ಕಾರ್ಯದರ್ಶಿಯಾಗಿ, ಜಿಲ್ಲಾಧ್ಯಕ್ಷರನ್ನಾಗಿ ಎಂ.ಚಂದ್ರಶೇಖರ್, ಜಿಲ್ಲಾ ಉಪಾಧ್ಯಕ್ಷರಾಗಿ ಸಯ್ಯದ್ ಸಮೀ, ಪ್ರಧಾನ ಕಾರ್ಯದರ್ಶಿಯಾಗಿ ಎಂ. ಗಿರೀಶ್, ಕಾರ್ಯದರ್ಶಿಗಳಾಗಿ ಎಂ. ಗಣೇಶ್, ಮಧುನಾಯಕ್, ಶ್ರೀನಿವಾಸ್(ಬೂದುಬಾಳು), ಜಯಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಗರುವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

ಮುಂದಿನ ದಿನಗಳಲ್ಲಿ ತಾಲೂಕು ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ಆಸಕ್ತಿ ಇರುವವರು ಜಿಲ್ಲಾಧ್ಯಕ್ಷ, ಉಪಾಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳನ್ನು ಸಂಪರ್ಕಿಸುವಂತೆ ಮನವಿ ಮಾಡಿದರು. ಕಾಂಗ್ರೆಸ್ ಮಂಡಿಸಿರುವ ಬಜೆಟ್‌ನಲ್ಲಿ ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಜಿಲ್ಲೆಯ ಪ್ರವಾಸೋದ್ಯಮ ಹಾಗೂ ಚಾಮರಾಜನಗರ- ಬೆಂಗಳೂರು ನಡುವಿನ ರೈಲ್ವೆ ಯೋಜನೆಗೆ ಆದ್ಯತೆ ನೀಡಿಲ್ಲ ಎಂದು ದೂರಿದರು.

ಕೆಆರ್‌ಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸೈಯದ್ ಸಮೀ, ಪ್ರಧಾನ ಕಾರ್ಯದರ್ಶಿ ಎಂ. ಗಿರೀಶ್, ಕಾರ್ಯದರ್ಶಿಗಳಾದ ಎಂ. ಗಣೇಶ್, ಮಧುನಾಯಕ್, ಶ್ರೀನಿವಾಸ್ (ಬೂದುಬಾಳು), ಜಯಶಂಕರ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net