

ಚಾಮರಾಜನಗರ: ಜಿಲ್ಲಾ ಸರ್ಕಾರಿ ವಕೀಲರ ಹಾಗೂ ಹೆಚ್ಚುವರಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗಳಿಗಾಗಿ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ಸಂಬಂಧಪಟ್ಟ ದಾಖಲಾತಿಗಳನ್ನು ದೃಢೀಕರಿಸಿ ಜುಲೈ 15ರೊಳಗೆ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.