ಚಿರತೆ ದಾಳಿಗೆ ಮೇಕೆ ಬಲಿ

04rajesh5
Published on

ಚಾಮರಾಜನಗರ: ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮಹದೇಶ್ವರ ದೇವಸ್ಥಾನದ ಬಳಿ ಚಿರತೆ ದಾಳಿಗೆ ಎರಡು ಮೇಕೆಗಳು ಬಲಿಯಾಗಿವೆ.
ಜ್ಯೋತಿಗೌಡನಪುರ ಗ್ರಾಮದ ಪಕ್ಕದ ಅಮ್ಮನಪುರದ ರೈತ ನಾರಾಯಣಸ್ವಾಮಿ ಬುಧವಾರ ಮೇಕೆ ಮೇಯಿಸಲು ಹೋಗಿದ್ದರು. ಈ ವೇಳೆ ಚಿರತೆ ದಾಳಿ ಮಾಡಿದ್ದು, ಎರಡು ಮೇಕೆಗಳು ಮೃತಪಟ್ಟಿವೆ. ವಿಷಯ ತಿಳಿದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net