ವಿದ್ಯಾರ್ಥಿಗಳು ಸೇವಾಮನೋಭಾವ ಬೆಳೆಸಿಕೊಳ್ಳಿ

07rajesh3
Published on

ಚಾಮರಾಜನಗರ: ವಿದ್ಯಾರ್ಥಿ ಜೀವನದಲ್ಲೇ ಮಕ್ಕಳು ಸೇವಾಮನೋಭಾವನೆಯನ್ನು ಬೆಳೆಸಿಕೊಂಡರೆ ನಮ್ಮ ಸಮಾಜ ಉತ್ತಮವಾಗಿರುತ್ತದೆ ಎಂದು ಬೆಂಗಳೂರಿನ ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಮಧು ಸಲಹೆ ನೀಡಿದರು.

ತಾಲೂಕಿನ ಸಿದ್ದಯ್ಯನಪುರ ಗ್ರಾಮದಲ್ಲಿ ೆಂಗಳೂರಿನ ಸಮರ್ಪಣಾ ಟ್ರಸ್ಟ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಭಾನುವಾರ ಆಯೋಜಿಸಿದ್ದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಾವು ಸಮಾಜದಲ್ಲಿ ಸೇವಾ ಮನೋಭಾವ ಮತ್ತು ಸಮರ್ಪಣಾ ಭಾವನೆಯನ್ನು ಮೂಡಿಸುವ ಉದ್ದೇಶದಿಂದ ಹಲವಾರು ವರ್ಷಗಳಿಂದ ಇಂತಹ ಸೇವಾಕಾರ್ಯಕ್ರಮಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದೇವೆ. ಸಿದ್ದಯ್ಯನಪುರ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ್ ಅವರ ಮನವಿಯಂತೆ ಜಿಲ್ಲೆಯ ಆಯ್ದ ಸರ್ಕಾರಿ ಶಾಲೆಗಳ ಸುಮಾರು 2000 ಮಕ್ಕಳಿಗೆ ಅನುಕೂಲವಾಗುವಂತೆ 5000 ನೋಟ್ ಪುಸ್ತಕಗಳನ್ನು ವಿತರಣೆ ಮಾಡಿದ್ದೇವೆ ಎಂದರು.

ಮಕ್ಕಳು ತಮ್ಮ ವಿದ್ಯಾರ್ಥಿ ಜೀವನದಿಂದಲೇ ಸೇವಾ ಮನೋಭಾವನೆಯನ್ನು ಅಳವಡಿಸಿಕೊಂಡರೆ ಮುಂದಿನ ಸಮಾಜ ಉತ್ತಮವಾಗಿರುತ್ತದೆ. ಟ್ರಸ್ಟ್ ಮೂಲಕ ನೀಡಿರುವ ನೋಟ್ ಬುಕ್‌ಗಳನ್ನು ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು. ಉತ್ತಮವಾಗಿ ಓದಿ ಉನ್ನತ ಹುದ್ದೆಗಳನ್ನು ಪಡೆಯಬೇಕು. ಈ ಮೂಲಕ ತಾವು ಕೂಡ ಸಮಾಜಕ್ಕೆ ಪಡೆದದ್ದನ್ನು ಹಿಂದಿರುಗಿಸಬೇಕು ಎಂದು ಕಿವಿ ಮಾತು ಹೇಳಿದರು.

ಈ ಸಂದರ್ಭದಲ್ಲಿ ಸಿದ್ದಯ್ಯನಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಬಸವಾಪುರ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಯಾನಗಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಚಾಮರಾಜನಗರ ಟೌನ್‌ನಲ್ಲಿರುವ ಪಿಡಬ್ಲ್ಯೂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅರ್ಬನ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಜಮಿಯಾ ಉರ್ದು ಶಾಲೆ, ಚಿಕ್ಕಹೊಳೆ ರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಾಗಲವಾಡಿಮೋಳೆ ಹಾಗೂ ಇನ್ನಿತರೆ ಶಾಲೆಗಳಿಗೆ ನೋಟ್ ಬುಕ್‌ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಸಿದ್ದಯ್ಯನಪುರ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ್, ಮುಖ್ಯ ಶಿಕ್ಷಕ ಪುಟ್ಟರಾಜು, ಸಹಶಿಕ್ಷಕರಾದ ನಂಜುಂಡಯ್ಯ, ಧನಂಜಯ್, ವಿನೋದ್, ಶ್ವೇತಾ ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net