ಕನಕ ಭವನ ಪೂರ್ಣಗೊಳಿಸುವಂತೆ ಸೂಚನೆ

07rajesh4
Published on

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನವನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಅಗತ್ಯವಾದ ಅನುದಾನವನ್ನು ಬಿಡುಗಡೆ ಮಾಡಿಸಿಕೊಡುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಿ.ಎಸ್.ಸುರೇಶ್ ತಿಳಿಸಿದರು.

ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು. ನಾನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವ ಜತೆಗೆ ಶೀಘ್ರದಲ್ಲಿಯೇ ಕನಕ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರ ನೇತೃತ್ವದಲ್ಲಿ ಉದ್ಘಾಟನೆ ಮಾಡಿಸುವ ದಿಕ್ಕಿನಲ್ಲಿ ಚಿಂತನೆ ಮಾಡೋಣ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಸಂಘದ ಅಧ್ಯಕ್ಷರು ಹಾಗೂ ಪದಾಧಿಕರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕೆ. ವೆಂಕಟೇಶ್, ಪೌರಾಡಳಿತ ಸಚಿವ ರಹೀಂ ಖಾನ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಸ್‌ಪಿಕೆ ಉಮೇಶ್, ಉಪಾಧ್ಯಕ್ಷ ಜಿ. ಮಹೇಶ್, ಗೌರವ ಅಧ್ಯಕ್ಷ ಹಳೇಪುರ ಬೆಳ್ಳೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಪಿ. ನಾಗರಾಜು, ನಿರ್ದೇಶಕರಾದ ಮಹೇಶ, ಕುಮಾರ್, ಚಿಕ್ಕರಾಜು, ನಟರಾಜು, ಚನ್ನೇಗೌಡ, ಶಿವಕುಮಾರ್, ಬಸವಣ್ಣ, ಮಹದೇವ್, ಉಷಾ ಲೋಕೇಶ್, ಮಾಜಿ ಉಪಾಧ್ಯಕ್ಷ ಮಾದಾಪುರ ರವಿಕುಮಾರ್ ಹಾಗೂ ಸಮಾಜದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net