ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಸಾಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಾಡು, ನುಡಿಯ ಸೇವೆಗೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮಾಸಾಶನದ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
ಕನಿಷ್ಠ 58 ವರ್ಷ ಪೂರ್ಣಗೊಳಿಸಿರುವ ಅರ್ಜಿದಾರ ಸಾಹಿತಿ, ಕಲಾವಿದರು ವಿವಿಧ ಕ್ಷೇತ್ರದಲ್ಲಿ 25 ವರ್ಷಗಳ ಗಣನೀಯ ಸೇವೆ ಸಲ್ಲಿಸಿರುವ ಬಗ್ಗೆ ಕಲಾ ದಾಖಲೆಗಳನ್ನು ಇಲಾಖೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂ.ಸಂ 08226-222210 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.