ಅತ್ಯುತ್ತಮ ರೈತ ಪ್ರಶಸ್ತಿಗೆ ಅರ್ಜಿ ಆಹ್ವಾನ

application
Published on

ಚಾಮರಾಜನಗರ: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಆವರಣದಲ್ಲಿ ಕೃಷಿ ಮೇಳವನ್ನು ಆಯೋಜಿಸಲಾಗುತ್ತಿದೆ. ಇದಕ್ಕೆ ಪೂರ್ವಭಾವಿಯಾಗಿ ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ಯುವ ರೈತ ಮಹಿಳಾ ಪ್ರಶಸ್ತಿ, ಜಿಲ್ಲಾಮಟ್ಟದ ಅತ್ಯುತ್ತಮ ರೈತ ಹಾಗೂ ರೈತ ಮಹಿಳಾ ಪ್ರಶಸ್ತಿ, ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ, ಎಂ.ಎಚ್ ಮರಿಗೌಡ ರಾಜ್ಯಮಟ್ಟದ ಅತ್ಯುತ್ತಮ ತೋಟಗಾರಿಕಾ ರೈತ ಪ್ರಶಸ್ತಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ರಾಜ್ಯ ಮಟ್ಟದ ಅತ್ಯುತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿ ಹಾಗೂ ಆರ್.ದ್ವಾರಕಿನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ರೈತ, ರೈತ ಮಹಿಳೆಯರು ಮತ್ತು ವಿಸ್ತರಣಾ ಕಾರ್ಯಕರ್ತರು ಅರ್ಜಿಗಳನ್ನು ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ಉಪ ನಿರ್ದೇಶಕರು, ತಾಲೂಕು ಸಹಾಯಕ ನಿರ್ದೇಶಕರು (ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆ), ಹರದನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಿಂದ ಅರ್ಜಿಗಳನ್ನು ಪಡೆದುಕೊಂಡು ಜು.31ರೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದು. ಜಂಟಿ ಕೃಷಿ ನಿರ್ದೇಶಕರಿಗೆ ಅಥವಾ ಕೃಷಿ ವಿಜ್ಞಾನ ಕೇಂದ್ರಕ್ಕೆ ಅಥವಾ ತಾಲೂಕಿನ ಸಹಾಯಕ ನಿರ್ದೇಶಕರಿಗೆ ಸಲ್ಲಿಸಬಹುದು. ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಹಾಗೂ ಯುವ ರೈತ ಮಹಿಳಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರ 35 ವರ್ಷ ಮೀರಿರಬಾರದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net