ಚಾಮರಾಜನಗರ: ಲೋಕಸಭೆ ಚುನಾವಣೆಯಲ್ಲಿ ನನಗೆ ಮತದಾರರು ಎಚ್ಚರಿಕೆ ಕೊಟ್ಟಿದ್ದಾರೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬುಧವಾರ ಆಯೋಜಿಸಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೃತಜ್ಞತಾ ಸಭೆ ಅವರು ಮಾತನಾಡಿದರು. ಹನೂರು, ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್‌ಗೆ ಅಧಿಕ ಮತಗಳನ್ನು ನೀಡಿದ್ದಾರೆ. ಚಾಮರಾಜನಗರದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಅನಾರೋಗ್ಯವಿದ್ದರೂ ಪ್ರಚಾರ ಮಾಡಿ ಲೀಡ್ ಕೊಡಿಸಿದರು. ಆದರೆ ನನ್ನ ತಿ.ನರಸೀಪುರ ಕ್ಷೇತ್ರದಲ್ಲಿ ಕಡಿಮೆ ಮತಗಳ ಅಂತರ ಸಿಕ್ಕಿದೆ. ಜನರು ಬೇರೆಲ್ಲಾ ಕ್ಷೇತ್ರಗಳಲ್ಲೂ ಲೀಡ್ ಕೊಟ್ಟರೆ, ನನಗೆ ಎಚ್ಚರಿಕೆ ಕೊಟ್ಟಿದ್ದಾರೆ ಎಂದರು.