15ರಂದು ಪಾಳ್ಯದಲ್ಲಿ ಜನಸ್ಪಂದನ ಕಾರ್ಯಕ್ರಮ

DC shilpa nag 01
Published on

ಚಾಮರಾಜನಗರ: ಸಾರ್ವಜನಿಕ ಕುಂದು ಕೊರತೆ ಅಹವಾಲುಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಕೊಳ್ಳೇಗಾಲ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಹನೂರು ಮತ್ತು ಕೊಳ್ಳೇಗಾಲ ಶಾಸಕರ ಸಮ್ಮುಖದಲ್ಲಿ ಹಾಗೂ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜು. 15ರಂದು ಬೆಳಗ್ಗೆ 10 ಗಂಟೆಗೆ ಪಾಳ್ಯ ಹೋಬಳಿಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಕಂದಾಯ ಇಲಾಖೆ ಹಾಗೂ ಇತರ ಎಲ್ಲ ಇಲಾಖೆಗಳ ಸಾರ್ವಜನಿಕ ಕುಂದು ಕೊರತೆ ಆಲಿಸಿ ಅಹವಾಲುಗಳನ್ನು ಸ್ವೀಕರಿಸಿ ಪರಿಹರಿಸಲು ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಯಾವುದೇ ಇಲಾಖೆಯ ಕುಂದು ಕೊರತೆಗಳಿದ್ದಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಗದಿತ ಕೌಂಟರ್‌ಗಳಲ್ಲಿ ನೋಂದಾಯಿಸಿಕೊಂಡು ಲಿಖಿತವಾಗಿ ಅಹವಾಲು ಅರ್ಜಿ ಸಲ್ಲಿಸುವ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಕೊಳ್ಳೇಗಾಲ ತಾಲೂಕು ತಹಸೀಲ್ದಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net