

ಚಾಮರಾಜನಗರ: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಸುಣ್ಣದ ಕಲ್ಲು ಮತ್ತು ಡಾಲಮೈಟ್ ಗಣಿ, ಕಬ್ಬಿಣ, ಕ್ರೋಮ್ ಮತ್ತು ಮ್ಯಾಂಗನೀಸ್ ಅದಿರು ಗಣಿ, ಸಿನಿ ಕಾರ್ಮಿಕರ ಮಕ್ಕಳಿಗೆ 2023-24ನೇ ಸಾಲಿನ ಶಿಕ್ಷಣಕ್ಕಾಗಿ ಹಣಕಾಸಿನ ನೆರವು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀಡಿ, ಸಿನಿ, ಎಲ್‌ಎಸ್‌ಡಿ, ಐಒಎಂಸಿ ಕೆಲಸಗಾರರ ಮಕ್ಕಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಆನ್‌ಲೈನ್ ಪ್ರಕ್ರಿಯೆಯ ಮೂಲಕ ಆಧಾರ್ ಸಕ್ರಿಯಗೊಳಿಸಿದ ಅಕೌಂಟ್‌ಗೆ ನೇರ ವರ್ಗಾವಣೆ ಯೋಜನೆ ಅಥವಾ ಡಿಬಿಟಿ ಮೂಲಕ ವಿದ್ಯಾರ್ಥಿವೇತನ ಮೊತ್ತವನ್ನು ಪಡೆಯಲಿದ್ದಾರೆ. ಅರ್ಜಿಗಳನ್ನು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ವೆಬ್‌ಸೈಟ್ ಮೂಲಕ ಸ್ವೀಕರಿಸಲಾಗುತ್ತದೆ. ವಿದ್ಯಾರ್ಥಿಗಳು ಅ.31ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಬೀಡಿ ಕಾರ್ಮಿಕರ ಚಿಕಿತ್ಸಾಲಯದ ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.