

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದ ನಿವಾಸಿ ಮಲಿಯಶೆಟ್ಟಿ(48) ಎಂಬುವವರು ಕಾಣೆಯಾಗಿದ್ದು ಇವರ ಪತ್ತೆಗೆ ಸಹಕರಿಸುವಂತೆ ಕೋರಲಾಗಿದೆ.
ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮುಂದಲೆ ಬೋಳಾಗಿರುತ್ತದೆ. ಕಪ್ಪು ಮತ್ತು ಬಿಳಿ ಮಿಶ್ರಿತ ತಲೆಕೂದಲು ಹೊಂದಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಸುಳಿವು ದೊರೆತಲ್ಲಿ ಬೇಗೂರು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.