ಕಬಿನಿ ನಾಲೆಗೆ ನೀರು

KABINI
Published on

ಚಾಮರಾಜನಗರ: ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಚುರುಕಾಗಿರುವ ಕಾರಣ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಜನ, ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಜು.10 ರಿಂದ 25 ರವರೆಗೆ ನೀರು ಹರಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಕೆ.ಮಹೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಲಾಶಯದ ವ್ಯಾಪ್ತಿಯ ಅಚ್ಚುಕಟ್ಟುದಾರರು ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಫ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net