

ಚಾಮರಾಜನಗರ : ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸೆನ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಅಜ್ಮಲ್ ಪಾಷಾ (32), ಹನೂರು ಪಟ್ಟಣದ ನಿವಾಸಿ ಎಸ್.ಮೋಹನ್‌ಕುಮಾರ್ (22) ಬಂಧಿತರು. ಹನೂರು ತಾಲೂಕಿನಿಂದ ಅಕ್ರಮವಾಗಿ ಒಣಗಾಂಜಾವನ್ನು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಚಾ.ನಗರ ಸೆನ್ ಪೊಲೀಸರು ಕಾರ್ಯಾಚರಣೆ ನಡೆಸಿ, ಹನೂರಿನ ಏಕಲವ್ಯ ವಸತಿ ಶಾಲೆಗೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಅಕ್ರಮವಾಗಿ ಬೈಕ್‌ನಲ್ಲಿ ಸಾಗಿಸುತ್ತಿದ್ದ 1.5 ಲಕ್ಷ ರೂ. ಮೌಲ್ಯದ 2 ಕೆ.ಜಿ ಒಣಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈ ಸಂಬಂಧ ಚಾಮರಾಜನಗರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಇನ್ಸ್‌ಪೆಕ್ಟರ್ ಸಾಗರ್ ಮಾಹಿತಿ ನೀಡಿದರು.