

ಗುಂಡ್ಲುಪೇಟೆ; ಪಟ್ಟಣದಲ್ಲಿರುವ ಶ್ರೀರಾಮೇಶ್ವರ ದೇವಾಲಯದಲ್ಲಿ ಸೋಮವಾರ ಭಕ್ತ ಮಾರ್ಕಂಡೇಯ ಜಯಂತಿ ಆಚರಿಸಲಾಯಿತು.
ಈ ಹಿನ್ನೆಲೆಯಲ್ಲಿ ದೇವಾಲಯವನ್ನು ತಳಿರು ತೋರಣ ಹಾಗೂ ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪ್ರಧಾನ ಅರ್ಚಕ ಶಂಕರನಾರಾಯಣ ಜೋಯಿಸ್ ಅವರ ನೇತೃತ್ವದಲ್ಲಿ ಶಿವಲಿಂಗಕ್ಕೆ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇವಾಲಯದ ಮಂಡಳಿ ಪದಾಧಿಕಾರಿಗಳು ಹಾಗೂ ವಿವಿಧ ಬಡಾವಣೆಯ ಭಕ್ತರು ಹಾಜರಿದ್ದರು.