ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಗುಣತೇಜ ಆಯ್ಕೆ

IMG-20240711-WA0269
Published on

ಚಾಮರಾಜನಗರ: ತಾಲೂಕಿನ ಮಾದಾಪುರದಲ್ಲಿರುವ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿ ರಾಷ್ಟ್ರಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

ಶಾಲೆಯ 9ನೇ ತರಗತಿ ವಿದ್ಯಾರ್ಥಿ, ತಾಲೂಕಿನ ವೆಂಕಟಯ್ಯನಛತ್ರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆಂಗ್ಲ ಭಾಷೆ ಉಪನ್ಯಾಸಕ ಎಸ್.ಪ್ರಶಾಂತ ಹಾಗೂ ಕೆ.ಆರ್.ರೇಖಾ ದಂಪತಿ ಪುತ್ರ ಗುಣತೇಜ ಬೆಂಗಳೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸಂಘಟನ್ ವತಿಯಿಂದ ಜು. 9 ಮತ್ತು 10ರಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಟೇಬಲ್ ಟೆನಿಸ್‌ನಲ್ಲಿ (19 ವರ್ಷದೊಳಗಿನ ವಿಭಾಗ) ವಿಜೇತನಾಗಿ ಹೊರಹೊಮ್ಮಿದ್ದಾನೆ. ಈ ಮೂಲಕ ರಾಷ್ಟ್ರಮಟ್ಟದ ಟೇಬಲ್ ಟೆನಿಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ದವಿಂದರ್ ಸಿಂಗ್ ಅಭಿನಂದನೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net