

ಚಾಮರಾಜನಗರ: ಜಿಲ್ಲೆಯ 8 ಗ್ರಾಮ ಪಂಚಾಯಿತಿಗಳಲ್ಲಿ 10 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದ್ದು, ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ತಾಲೂಕಿನ ಆಲೂರು ಗ್ರಾಮ ಪಂಚಾಯಿತಿಯಲ್ಲಿ 1, ಗುಂಡ್ಲುಪೇಟೆ ತಾಲೂಕಿನ ಕೊತನೂರು ಗ್ರಾಮ ಪಂಚಾಯಿತಿಯಲ್ಲಿ 2, ಆಲತ್ತೂರು ಗ್ರಾಮ ಪಂಚಾಯಿತಿಯಲ್ಲಿ 2, ಬಾಚಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 1, ಕೆಲಸೂರು ಗ್ರಾಮ ಪಂಚಾಯಿತಿಯಲ್ಲಿ 1, ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮ ಪಂಚಾಯಿತಿಯಲ್ಲಿ 1, ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ 1, ಯರಗಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ 1 ಗ್ರಾಮ ಒನ್ ಕೇಂದ್ರಗಳನ್ನು ತೆರೆಯಬೇಕಾಗಿದೆ. ಆಸಕ್ತಿಯುಳ್ಳವರು ಆನ್ ಲೈನ್ ಮುಖಾಂತರ ಜುಲೈ 15ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಸಹಾಯವಾಣಿ ಸಂಖ್ಯೆ 080-69008800/9148712473 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.