

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಜು.13ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಮಧ್ಯಾಹ್ನ 2.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವ ಸಚಿವರು ನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ವತಿಯಿಂದ ಆಯೋಜಿಸಿರುವ ನಾಡಪ್ರಭು ಕೆಂಪೇಗೌಡರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.