ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

Adarsha Shakshaka Prashasti Application
Published on

ಚಾಮರಾಜನಗರ: ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ನೀಡಲು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರು ಅಥವಾ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳು ಗೃಹಲಕ್ಷ್ಮಿ ಯೋಜನೆಯಡಿ ಪ್ರಯೋಜನ ಪಡೆಯಲು ಅನುವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ನ್ಯಾಷನಲ್ ಪೋರ್ಟಲ್ ಫಾರ್ ಟ್ರಾನ್ಸ್‌ಜೆಂಡರ್ ಪರ್ಸನ್ಸ್ ವತಿಯಿಂದ ಪಡೆದಿರುವ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿಯನ್ನು ಪರಿಗಣಿಸಲು ಸರ್ಕಾರ ಅನುಮೋದನೆ ನೀಡಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದೆ.

ಈ ಹಿನ್ನೆಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಸೌಲಭ್ಯಕ್ಕಾಗಿ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಟ್ರಾನ್ಸ್ ಜೆಂಡರ್ ಗುರುತಿನ ಚೀಟಿ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಆಧಾರ್ ಕಾರ್ಡ್ ಕಡ್ಡಾಯವಾಗಿ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net