ಸ್ವಯಂಸೇವಾ ಸಂಸ್ಥೆಗಳಿಂದ ಸ್ವಚ್ಛತೆಗೆ ಆದ್ಯತೆ

02
Published on

ಚಾಮರಾಜನಗರ: ದೇಶದ ಅಭಿವೃದ್ಧಿಗೆ ಸ್ವಯಂಸೇವಾ ಸಂಸ್ಥೆಗಳ ಕೊಡುಗೆ ಅಪಾರವಾಗಿದ್ದು, ಹಲವಾರು ಕ್ಷೇತ್ರಗಳಲ್ಲಿ ಸ್ವಯಂಸೇವಾ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಚಾಮರಾಜನಗರ ಯೂತ್ ಾರ್ ಸೇವಾ ಸಂಸ್ಥೆ ಮನೋಜ್ ತಿಳಿಸಿದರು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಉದ್ಯಾನದಲ್ಲಿ ನಗರಸಭೆ, ಯೂತ್ ಾರ್ ಸೇವಾ ಹಾಗೂ ಚಾಮರಾಜನಗರ ವಿಶ್ವ ವಿದ್ಯಾಲಯದ ಎನ್.ಎಸ್.ಎಸ್. ಘಟಕ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು.

ಎಲ್ಲರೂ ಸ್ವಚ್ಛತೆಯ ಬಗ್ಗೆ ಗಮನಹರಿಸಬೇಕು. ನಾವು ವಾಸಿಸುವ ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು. ಜಾತ್ರೆ, ಉತ್ಸವ, ಸಮಾರಂಭಗಳಲ್ಲಿ ಕಸ ಹಾಗೂ ನಿಗದಿತ ಸ್ಥಳಗಳಲ್ಲಿ ಹಾಕುವುದರಿಂದ ಸ್ವಚ್ಛತೆ ಕಾಪಾಡಬೇಕಿದೆ ಎಂದರು.

ನಗರಸಭೆಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಮಾತನಾಡಿ, ಶ್ರೀ ಚಾಮರಾಜೇಶ್ವರ ರಥೊತ್ಸವದ ಅಂಗವಾಗಿ ಎನ್‌ಜಿಒ ಕಾರ್ಯಕರ್ತರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಉದ್ಯಾನವನ ಸ್ವಚ್ಛಗೊಳಿಸಲು ಮುಂದಾಗಿದ್ದಾರೆ. ಎಲ್ಲ ಕೆಲಸಗಳನ್ನು ಇಲಾಖೆಗಳೇ ಮಾಡಲು ಸಾಧ್ಯವಿಲ್ಲ, ಅದಕ್ಕೆ ಕೆಲವು ಸಂಘಟನೆಗಳು ಕೈ ಜೋಡಿಸಿದರೆ ಶುದ್ಧವಾಗುತ್ತದೆ ಎಂದು ಹೇಳಿದರು.

ಎನ್.ಎಸ್.ಎಸ್. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಆರ್.ಮಹೇಶ್ ಕೋಡಿಉಗನೆ ಮಾತನಾಡಿ, ಆಷಾಡ ಮಾಸದಲ್ಲಿ ನಡೆಯುವ ರಥೋತ್ಸವಕ್ಕೆ ಲಕ್ಷಾಂತರ ಭಕ್ತಾದಿಗಳು ಬರುವುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕಾಗುತ್ತದೆ. ಸಾರ್ವಜನಿಕರು ಕಸಗಳನ್ನು ರಸ್ತೆಯಲ್ಲೇ ಹಾಕಬಾರದು. ಇದರಿಂದ ಸೊಳ್ಳೆಗಳು ಹೆಚ್ಚಾಗಿ ರೋಗಗಳು ಹರಡಲಿದೆ ಎಂದು ಹೇಳಿದರು. ಹಸಿರು ಪಡೆ ಕಾರ್ಯದರ್ಶಿ ಸತೀಶ್, ಗ್ರಾಮ ಮಿತ್ರ ಫೌಡೇಷನ್ ಕಾರ್ಯದರ್ಶಿ ವಿಜಯಪ್ರಸಾದ್, ಸಮಾಜಸೇವಕರಾದ ಡಾ.ಪರಮೇಶ್ವರಪ್ಪ, ಸುರೇಶ್‌ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net