

ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 2024-25ನೇ ಸಾಲಿನಲ್ಲಿ ಜಿಲ್ಲಾವಲಯ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಬಾವಿ ಮತ್ತು ಕೃಷಿಹೊಂಡಗಳಿಗೆ ಉಚಿತ ಬಿತ್ತನೆ ಮೀನುಮರಿ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ ವಿತರಣೆ, ಮೀನು ಮಾರುಕಟ್ಟೆಗಳ ನಿರ್ಮಾಣ ಹಾಗೂ ಮೀನು ಮಾರಾಟಕ್ಕೆ ಸಹಾಯ ಯೋಜನೆಯಡಿ ಮೀನುಗಾರಿಗೆ ದ್ವಿಚಕ್ರ ವಾಹನ, ಸೈಕಲ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಆಸಕ್ತ ಒಳನಾಡು ಮೀನುಗಾರರು ಸಹಾಯಧನ ಪಡೆಯಲು ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಆ.2ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.