ಪತ್ರಿಕಾ ವಿತರಕರ ಸಮ್ಮೇಳನ ಲೋಗೋ ಬಿಡುಗಡೆ

22rajesh4
Published on

ಚಾಮರಾಜನಗರ: ಚಿತ್ರದುರ್ಗದಲ್ಲಿ ಸೆ.8 ರಂದು ಆಯೋಜಿಸಿರುವ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ ಲೋಗೋವನ್ನು ಶಾಸಕ ಸಿ.ಪುಟ್ಟರಂಗಶೆಟ್ಟಿ ಬಿಡುಗಡೆ ಮಾಡಿದರು.

ನಗರದ ವರ್ತಕರ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಲಾಂಛನ ಅನಾವರಣಗೊಳಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾಧಿಕಾರಿ ಶಿಲ್ಪಾನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇಡ, ಸಂಘದ ಜಿಲ್ಲಾಧ್ಯಕ್ಷ ದೇವರಾಜು ಕಪ್ಪಸೋಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಕೂರು ಪ್ರಸಾದ್, ಬೆಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ಜಿಲ್ಲಾ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಸಿ.ಪುರುಷೋತ್ತಮ್, ಪ್ರಧಾನ ಕಾರ್ಯದರ್ಶಿ ಎನ್.ಅಕ್ಷಯ್, ಗೌರವಾಧ್ಯಕ್ಷ ಎಚ್.ಎಸ್.ಚಂದ್ರಶೇಖರ್, ನಿರ್ದೇಶಕರಾದ ಆರ್.ಎನ್. ಸಿದ್ದಲಿಂಗಸ್ವಾಮಿ. ಎಂ. ರೇಣುಕೇಶ್, ಎಂ.ಲಿಂಗಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net