ಉದ್ಯೋಗಕ್ಕೆ ನೇರ ಸಂದರ್ಶನ 25ಕ್ಕೆ

job-fair-feaured.png
Published on

ಚಾಮರಾಜನಗರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೆಡ್‌ಪ್ಲಸ್ ಮೈಸೂರು ಹಾಗೂ ಬೆಂಗಳೂರು ಸಹಯೋಗದೊಂದಿಗೆ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಜು.25ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3.30 ರವರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. 18 ರಿಂದ 30ರ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿಗಳು ಅಥವಾ ದೂ.ಸಂ 08226-224430 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಎ.ಮೊಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net