

ಚಾಮರಾಜನಗರ: ನಾಡಿನ ಕಲೆ, ಸಾಹಿತ್ಯ, ಕನ್ನಡ ಭಾಷೆ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಮೈಸೂರು ಅರಸ ಮುಮ್ಮಡಿ ಕೃಷ್ಣರಾಜ ಒಡೆಯರ್ ಕೊಡುಗೆ ಅಪಾರವಾಗಿದೆ ಎಂದು ಶ್ರೀಚಾಮರಾಜೇಶ್ವರ ದೇವಾಲಯದ ಆಡಳಿತ ಅಧಿಕಾರಿ ಮಹೇಶ್ ತಿಳಿಸಿದರು.
ನಗರದ ಜಿಲ್ಲಾ ಕಸಾಪ ಕಚೇರಿಯಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು , ಶ್ರೀಗಂಧ ಕನ್ನಡ ಯುವ ವೇದಿಕೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್ ಸ್ಮರಣೆ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮುಮ್ಮಡಿ ಕೃಷ್ಣರಾಜ ಒಡೆಯರ್ ಚಾಮರಾಜನಗರದ ನಿರ್ಮಾತೃವಾಗಿದ್ದು, ಸಮಾಜದ ಅಭಿವೃದ್ಧಿಯ ಕಳಕಳಿಯ ದೃಷ್ಟಿಯಿಂದ ಶ್ರೇಷ್ಠ ಕಾರ್ಯಗಳನ್ನು ಮಾಡಿದ್ದಾರೆ. ಶ್ರೀಚಾಮರಾಜೇಶ್ವರ ಸ್ವಾಮಿ ದೇವಾಲಯ ಸರ್ಕಾರ ಮತ್ತು ಭಕ್ತರ ಸಹಕಾರದಿಂದ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ವೆಂಕಟ ನಾಗಪ್ಪ ಶೆಟ್ಟಿ, ಕನ್ನಡ ಮಹಾಸಭೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ್ ಗೌಡ, ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ, ಬರಹಗಾರ ಎಸ್.ಲಕ್ಷ್ಮೀನರಸಿಂಹ, ನಗರಸಭಾ ಮಾಜಿ ಅಧ್ಯಕ್ಷ ಮಹದೇವನಾಯಕ, ಸದಸ್ಯ ಗಣೇಶ್ ದೀಕ್ಷಿತ್, ಸುರೇಶ್ ನಾಯಕ , ರವಿಚಂದ್ರ ಪ್ರಸಾದ್, ಸುರೇಶ್ ಗೌಡ , ಶಿವಲಿಂಗಮೂರ್ತಿ, ಜಯಕುಮಾರ್ ಹಾಗೂ ಇತರರು ಹಾಜರಿದ್ದರು.