ನಿರಂತರವಾಗಿ ಭ್ರಷ್ಟಚಾರದಲ್ಲಿ ಮುಳುಗಿರುವ ಕಾಂಗ್ರೆಸ್

01rajesh5
Published on

ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಎಸ್ಸಿ/ಎಸ್ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿರಿದ್ದ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಪ್ರಭಾರ ಜಿಲ್ಲಾಧ್ಯಕ್ಷ ಆರ್.ಸುಂದರ್ ಆರೋಪಿಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ನಗರ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಎಸ್‌ಇಪಿ/ಟಿಎಸ್‌ಪಿ ಅನುದಾನ ದುರ್ಬಳಕೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ, ಮುಡಾ ಹಗರಣದಲ್ಲಿ ಸಿಲುಕಿದೆ. ಈ ಬಗ್ಗೆ ಸದನದೊಳಗೆ, ಹೊರಗೆ ಹೋರಾಟ ಮಾಡಿದರು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದಲ್ಲಿ ಏನು ಆಗಿಲ್ಲ ಅನ್ನುವ ರೀತಿಯಲ್ಲಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಹೋರಾಟ ಮಾಡುತ್ತದೆ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ 40 ಸಾವಿರ ಕೋಟಿ ರೂ. ದುರುಪಯೋಗ ಪಡಿಸಿಕೊಂಡು ಎರಡು ಸಮುದಾಯಗಳಿಗೂ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಸಭೆಯಲ್ಲಿ ನಗರಮಂಡಲ ಅಧ್ಯಕ್ಷ ಶಿವರಾಜು, ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಜಯಸುಂದರ್, ಪ್ರಧಾನ ಕಾರ್ಯದರ್ಶಿ ಕೂಸಣ್ಣ, ಮಹೇಶ್, ಕಾರ್ಯಾಲಯ ಕಾರ್ಯದರ್ಶಿ ನಾಗರಾಜು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net