ಮೀಸಲಾತಿಗಾಗಿ ಮುಸ್ಲಿಮರ ಪ್ರತಿಭಟನೆ

27raju1
Published on

ಚಾಮರಾಜನಗರ: ಮುಸ್ಲಿಂ ಸಮುದಾಯಕ್ಕೆ 2(ಬಿ) ಅಡಿಯಲ್ಲಿ ಮೀಸಲಾತಿಯನ್ನು ಪುನರ್ ಸ್ಥಾಪಿಸಬೇಕೆಂದು ಒತ್ತಾಯಿಸಿ ಎಸ್‌ಡಿಪಿಐ ಪಕ್ಷದ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.


ನಗರದ ಎಸ್‌ಡಿಪಿಐ ಕಚೇರಿಯಿಂದ ಶ್ರೀಭುವನೇಶ್ವರಿ ವೃತ್ತದವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ರಸ್ತೆ ತಡೆದು ಧರಣಿ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಸರ್ಕಾರ ಮಾ.24ರಂದು ಕ್ಯಾಬಿನೆಟ್ ಸಭೆಯಲ್ಲಿ ಮುಸ್ಲಿಂ ಸಮುದಾಯಕ್ಕಿದ್ದ 2(ಬಿ) ಮೀಸಲಾತಿಯನ್ನು ರದ್ದುಪಡಿಸಿದೆ. ಇದು ಅಸಂವಿಧಾನಿಕ ಹಾಗೂ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಮಾಡಿರುವ ಉದ್ದೇಶಿತ ದಾಳಿಯಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು. ಸಂವಿಧಾನದದಲ್ಲಿ ಧರ್ಮಧಾರಿತ ಮೀಸಲಾತಿ ಇಲ್ಲದಿರುವುದರಿಂದ 2 (ಬಿ) ಪ್ರವರ್ಗದಡಿಯಲ್ಲಿ ಇತರೆ ಹಿಂದುಳಿದ ವರ್ಗಗಳಂತೆ ಕರ್ನಾಟಕದ ಮುಸ್ಲಿಂ ಸಮುದಾಯ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗವೆಂದು ವೈಜ್ಞಾನಿಕ ಅಧ್ಯಯನದ ಮೂಲಕ ಗುರುತಿಸಿ 2(ಬಿ) ಮೀಸಲಾತಿ ನೀಡಲಾಗಿತ್ತು. ಸ್ವಾತಂತ್ರ್ಯ ನಂತರ ನಾಗನ ಗೌಡ ಸಮಿತಿ, ವೆಂಕಟಸ್ವಾಮಿ ಆಯೋಗ ಮತ್ತು ಚನ್ನಪ್ಪ ರೆಡ್ಡಿ ಆಯೋಗ ಕೂಡ ಮುಸ್ಲಿಮರನ್ನು ಹಿಂದುಳಿದ ವರ್ಗಗಳಿಗೆ ಸೇರಿಸಲಾಗಿತ್ತು ಎಂದು ವಿವರಿಸಿದರು.


ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ ತಡೆಯೊಡ್ಡುವ ಹಾಗೂ ಮುಖ್ಯವಾಹಿನಿಗೆ ಬರದಂತೆ ನೋಡಿ ಕೊಳ್ಳುವ ಷಡ್ಯಂತ್ರದ ಮುಂದುವರಿದ ಭಾಗವಾಗಿ 2(ಬಿ) ಮೀಸಲಾತಿ ರದ್ದುಪಡಿಸಿರುವುದು ದೃಢವಾಗುತ್ತದೆ. ಸಂವಿಧಾನದ ಆಶಯಗಳಂತೆ ಸರ್ಕಾರ ತನ್ನ ಆಡಳಿತ ನಡೆಸಬೇಕೆ ಹೊರತು ತನ್ನ ಗುಪ್ತ ಅಜೆಂಡಾವನ್ನು ಜಾರಿಗೊಳಿಸಲು ಅಲ್ಲ. ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನಿಗಧಿಯಾಗಿದ್ದ 2(ಬಿ) ಮೀಸಲಾತಿಯನ್ನು ಮರು ಸ್ಥಾಪಿಸಬೇಕೆಂದು ಒತ್ತಾಯಿಸಿದರು.


ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್, ಜಿಲ್ಲಾ ಉಪಾಧ್ಯಕ್ಷರಾದ ಸೈಯದ್ ಆರ್ೀ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಗಾಳೀಪುರ, ಜಿಲ್ಲಾ ಕಾರ್ಯದರ್ಶಿ ಜಬೀ ನೂರ್, ಜಿಲ್ಲಾ ಖಜಾಂಚಿ ಸೈಯದ್ ನಯಾಜ್, ನಗರಸಭಾ ಸದಸ್ಯರಾದ ಮೊಹಮ್ಮದ ಅಮೀಕ್, ಕಲೀಲ್ ಉಲ್ಲಾ, ಅಫ್ಸರ್ ಪಾಷ, ಸಂಘಸೇನಾ, ಬಿಎಸ್ಪಿ ಉಪಾಧ್ಯಕ್ಷ ಬ್ಯಾಡಮೂಡ್ಲು ಬಸವಣ್ಣ ಹಾಗೂ ಮದೀನ ಮಸೀದಿ ಅಧ್ಯಕ್ಷ ನಯೀಮ್ ಉಲ್ಲಾ ಹಕ್, ಮಕ್ಕಾ ಮಸೀದಿ ಅಧ್ಯಕ್ಷ ಸರ್ದಾರ್ ಸಾಬ್ ಮತ್ತು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net