

ಚಾಮರಾಜನಗರ: ಜಿಲ್ಲೆಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 20 ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ಶಾಲೆಗಳಲ್ಲಿನ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಇಂಗ್ಲಿಷ್ ಬೋಧನೆಗೆ ಬಿಎ, ಬಿ.ಇಡಿ ಇಂಗ್ಲಿಷ್ ಐಚ್ಛಿಕ ವಿಷಯದಲ್ಲಿ ಪದವಿ ಪಡೆದಿರಬೇಕು. ಗಣಿತ ಹಾಗೂ ವಿಜ್ಞಾನ ವಿಷಯಗಳನ್ನು ಬೋಧನೆ ಮಾಡಲು ಬಿ.ಎಸ್ಸಿ, ಬಿ.ಇಡಿ (ಪಿಎಂ/ಸಿಬಿ) ಪದವಿ ಪಡೆದಿರಬೇಕು. ಬೋಧನೆಯಲ್ಲಿ ಅನುಭವವುಳ್ಳ ಆಸಕ್ತರು ವಿದ್ಯಾರ್ಹತೆ ಮತ್ತು ಸ್ವವಿವರದ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಆ.8ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ದೂ. 08226-226070, ಚಾಮರಾಜನಗರ ತಾಲೂಕು ದೂ. 08226-223823, ಕೊಳ್ಳೇಗಾಲ ತಾಲೂಕು ದೂ. 08224-255060, ಗುಂಡ್ಲುಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ದೂ. 08229-222984 ಹಾಗೂ ಯಳಂದೂರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ದೂ. 08226-240309 ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಮಂಜುಳಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.