ಕೂಡ್ಲೂರು ಗ್ರಾಪಂ ಕಚೇರಿ ಎದುರು ಪ್ರತಿಭಟನೆ

07rajesh10
Published on

ಚಾಮರಾಜನಗರ: ತಾಲೂಕಿನ ಕೂಡ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಗನಾ ವಿರುದ್ಧ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.

ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಜಮಾಯಿಸಿದ ಸದಸ್ಯರು, ಅಧ್ಯಕ್ಷೆ ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಬೆದರಿಕೆ ಹಾಕಿ ಗೌರವಧನವನ್ನು ಡ್ರಾ ಮಾಡಿಕೊಂಡಿದ್ದಾರೆ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಎಲ್ಲ ವಿಚಾರದಲ್ಲೂ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಾರೆ. ಇದರಿಂದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದೆ ಎಂದು ದೂರಿದರು.

ಸ್ಥಳಕ್ಕೆ ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಪ್ರಕಾಶ್ ಭೇಟಿ ನೀಡಿ ಮಾಹಿತಿ ಕಲೆಹಾಕಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮಹದೇವಸ್ವಾಮಿ, ಸದಸ್ಯರಾದ ಗಿರೀಶ್, ಮಹದೇವಸ್ವಾಮಿ ಹಾಗೂ ಮಾಜಿ ಅಧ್ಯಕ್ಷ ಲಿಂಗಾರಾಜು, ಮಾಜಿ ಸದಸ್ಯ ಮುತ್ತುರಾಜ್ ಹಾಗೂ ಮಹಿಳಾ ಸದಸ್ಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net