ಶ್ರೀಚಾಮರಾಜೇಶ್ವರಸ್ವಾಮಿಗೆ ವಿಶೇಷಪೂಜೆ

12Rajesh4
Published on

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ 77 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ ಸೋಮವಾರ ವಿಶೇಷಪೂಜೆ ಸಲ್ಲಿಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿ ಸಿದ್ದರಾಮಯ್ಯನವರ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಅವರ ನೇತೃತ್ವದಲ್ಲಿ ಶ್ರೀ ಚಾಮರಾಜೇಶ್ವರಸ್ವಾಮಿಗೆ ಪಂಚಾಮೃತ ಅಭಿಷೇಕ, ಎಳನೀರು ಅಭಿಷೇಕ , ಸಿದ್ದರಾಮಯ್ಯನವರ ಹೆಸರಿನಲ್ಲಿ ಅರ್ಚನೆ ಮಾಡಿಸಿ ವಿಶೇಷಪೂಜೆ ಸಲ್ಲಿಸಲಾಯಿತು. ಇದಕ್ಕೂ ಮುನ್ನಾ ದೀನಬಂಧು ಆಶ್ರಮದಲ್ಲಿ ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಬೆಳ್ಳೇಗೌಡ ಮಾತನಾಡಿ, ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಆರೋಗ್ಯ, ಆಯಸ್ಸು ಕರುಣಿಸಲಿ, ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿ ಎಂದು ಆಶಿಸಿದರು.

ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಎಸ್‌ಪಿಕೆ, ಸಿದ್ದರಾಮಯ್ಯ ಅಭಿಮಾನಿ ಬಳಗದ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ, ಸಂಘಟನಾ ಕಾರ್ಯದರ್ಶಿ ಕೆ.ಕೆ.ಹುಂಡಿ ನಾಗರಾಜು, ಕೆರೆಹಳ್ಳಿರೇವಣ್ಣ, ಉಪಾಧ್ಯಕ್ಷ ಸೊತ್ತನಹುಂಡಿ ಸೋಮಣ್ಣ, ಕಾರ್ಯದರ್ಶಿ ಮಹದೇವಸ್ವಾಮಿ, ಎಂ.ಸ್ವಾಮಿ ಕರಿನಂಜನಪುರ, ನಂದಕುಮಾರ್, ಮಹದೇವಸ್ವಾಮಿ, ಯಳಂದೂರು ಮಲ್ಲು, ತಮ್ಮಡೇಗೌಡ, ಹೆಗ್ಗಡೆಹುಂಡಿ ಸುಂದರ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net