

ಚಾಮರಾಜನಗರ: ನಗರಸಭೆ ವ್ಯಾಪ್ತಿಯಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್ ನೇತೃತ್ಚದ ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ ಪರವಾನಗಿ ಹೊಂದಿಲ್ಲದ, ಸ್ವಚ್ಚತೆ ಕಾಪಾಡದ ಹಾಗೂ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಅಂಗಡಿಗಳಿಗೆ ನೋಟಿಸ್ ನೀಡಿ ದಂಡ ವಿಧಿಸಿದೆ.
ನಗರದ ಡಿವಿಯೇಷನ್ ರಸ್ತೆ, ಬಿ.ರಾಚಯ್ಯ ಜೋಡಿರಸ್ತೆ ಹಾಗೂ ಇನ್ನಿತರೆ ರಸ್ತೆಗಳಲ್ಲಿ ಇರುವ ಬಾರ್ ಅಂಡ್ ರೆಸ್ಟೋರೆಂಟ್‌ಗಳಿಗೆ ಬೆಳಿಗ್ಗೆಯಿಂದಲೇ ವ್ಯಾಪಕವಾಗಿ ಭೇಟಿ ನೀಡಿದ ತಂಡ ಸ್ವಚ್ಚತೆ ಕಾಪಾಡಿಕೊಳ್ಳಲಾಗಿದೆಯೇ, ನಗರಸಭೆಯಿಂದ ಪರವಾನಗಿ ಹೊಂದಿದ್ದಾರೆಯೇ, ಪರವಾನಗಿ ನವೀಕರಿಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸಿದರು. ಈ ವೇಳೆ ಪರವಾನಗಿ ಪಡೆಯದ, ಪ್ಲಾಸ್ಟಿಕ್‌ಲೋಟ, ಕವರ್‌ಗಳನ್ನು ಬಳಸುತ್ತಿದ್ದ ಅಂಗಡಿಗಳಿಗೆ 7 ಸಾವಿರ ರೂ. ದಂಡ ವಿಧಿಸಿ ನೋಟಿಸ್ ನೀಡಿದರು.
ಪರವಾನಗಿ ಪಡೆಯದ ಬಾರ್ ಮತ್ತು ರೆಸ್ಟೋರೆಂಟ್ ಮಾಲೀಕರು ಶೀಘ್ರವೇ ನಗರ ಸಭೆಯಿಂದ ಪರವಾನಗಿ ಪಡೆದುಕೊಳ್ಳಬೇಕು, ಇಲ್ಲದಿದ್ದಲ್ಲಿ ಅಬಕಾರಿ ಇಲಾಖೆಗೆ ಮಾಹಿತಿ ನೀಡಿ ಅಬಕಾರಿ ಪರವಾನಗಿ ರದ್ದು ಮಾಡಲು ಶಿಾರಸ್ಸು ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್ ಹಾಗೂ ಇತರರು ಹಾಜರಿದ್ದರು.