ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

12rajesh8
Published on

ಚಾಮರಾಜನಗರ: ನೆರೆ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಮೂಲಕ ಸಾಗಿ ಶ್ರೀಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಬಾಂಗ್ಲಾ ದೇಶದ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಿವು ವಿರಾಟ್ ಮಾತನಾಡಿ, ಬಾಂಗ್ಲಾ ದೇಶದಲ್ಲಿ ಇತ್ತೀಚೆಗೆ ಅರಾಜಕತೆ ಸೃಷ್ಟಿಯಾಗಿದ್ದು, ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಸಾಕಷ್ಟು ರೀತಿಯಲ್ಲಿ ದೌರ್ಜನ್ಯ ದಬ್ಬಾಳಿಕೆಯನ್ನು ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಾಂಗ್ಲಾ ದೇಶದಲ್ಲಿರುವ ಮುಸ್ಲಿಂರು ಈ ಸಂದರ್ಭವನ್ನು ಉಪಯೋಗಿಸಿಕೊಂಡು ಹಿಂದೂಗಳ ಮನೆಗಳ ಮೇಲೆ ಹಾಗೂ ದೇವಾಲಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಈಗಾಗಲೇ ಹಿಂದೂಗಳ ಮನೆಗಳು ಮತ್ತು ದೇವಾಲಯಗಳನ್ನು ನಾಶಗೊಳಿಸಲು ಮುಂದಾಗಿದ್ದಾರೆ. ಈ ನಡುವೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಹಿಂದೂಗಳನ್ನು ಒತ್ತಾಯಿಸುತ್ತಿದ್ದಾರೆ. ಇಲ್ಲವಾದರೇ ದೇಶಬಿಟ್ಟು ತೊಲಗಿ ಎಂದು ಹಿಂಸೆ ನೀಡುತ್ತಿದ್ದಾರೆ. ಇದು ಅತ್ಯಂತ ಖಂಡನೀಯವಾಗಿದೆ ಎಂದರು.

ಬಾಂಗ್ಲಾ ದೇಶದಲ್ಲಿ ನಡೆದಿರುವ ಹಿಂದೂಗಳ ಮೇಲೆನ ದೌರ್ಜನ್ಯವನ್ನು ನಮ್ಮ ದೇಶದ ಹಲವಾರು ದೇಶದ್ರೋಹಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಖುಷಿಪಡುತ್ತಿದ್ದಾರೆ. ಇದು ನಾಚಿಕೆಗೇಡಿನ ಸಂಗತಿಯಾಗಿದೆ. ಇದು ಈಗೇಯೇ ಮುಂದುವರಿದರೇ ದೇಶದಲ್ಲಿರುವ ಹಿಂದೂಗಳು ಒಂದಾಗಿ, ಬಾಂಗ್ಲಾ ದೇಶದ ಹಿಂದೂಗಳ ಪರವಾಗಿ ಉಗ್ರವಾದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಮಾಜಿ ಚುಡಾ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ, ರಾ.ಸತೀಶ್, ಮಧು, ಮಾರ್ಕೆಟ್ ಕುಮಾರ್, ಶ್ರೀಕಂಠ, ಮಂಜುನಾಥ್ ಗೌಡ, ಹಿಂದೂ ಜಾಗರಣಾ ವೇದಿಕೆ ಜಿಲ್ಲಾಧ್ಯಕ್ಷ ಸುಂದರ್ ರಾಜ್, ಎನ್.ಮಂಜುನಾಥ್, ಮಾಧ್ಯಮ ಸಂಚಾಲಕ ವಿರೇಂದ್ರ, ಬಂಗಾರ್ ನಾಯಕ, ರಾಮಸಮುದ್ರ ಶಿವು, ಕೂಸಣ್ಣ, ರಾಜು, ನಗರಸಭಾ ಸದಸ್ಯ ಮನೋಜ್ ಪಟೇಲ್, ಚಿಕ್ಕರಾಜು, ಬುಲೇಟ್ ಚಂದ್ರು, ರಾಜೇಶ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net