ಉತ್ತಮ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

Published on

ಚಾಮರಾಜನಗರ : ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ಏಕಲವ್ಯ ಪ್ರಶಸ್ತಿ ಪುರಸ್ಕೃತ ರೀನಾ ಜಾರ್ಜ್ ಸಲಹೆ ನೀಡಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜೆಎಸ್‌ಎಸ್ ಕಾಲೇಜ್ ಆ್, ಜೆಎಸ್‌ಎಸ್ ಕಾಲೇಜ್ ಆ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಜೆಎಸ್‌ಎಸ್ ಸ್ಕೂಲ್ ಆ್ ನರ್ಸಿಂಗ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಭಾಗವಹಿಸಬೇಕು. ಕ್ರೀಡೆಯಿಂದ ಆರೋಗ್ಯದ ಜತೆಗೆ ಜ್ಞಾನವೂ ವೃದ್ಧಿಯಾಗಲಿದೆ. ಕ್ರೀಡೆಯಲ್ಲಿ ತೊಡಗುವ ವಿದ್ಯಾರ್ಥಿಗಳು ನಿರಂತರವಾದ ತರಬೇತಿ ಪಡೆದುಕೊಳ್ಳಿ. ವಿದ್ಯಾರ್ಥಿಗಳಿಗೆ ಶಿಕ್ಷಕರು ಹಾಗೂ ಪಾಲಕರು ಉತ್ತಮ ಸಹಕಾರ ನೀಡಿದರೇ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜೆಎಸ್‌ಎಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಜಿ.ವಿನಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಹೆಚ್ಚಾಗಿ ಭಾಗವಹಿಸಬೇಕು. ಇದರಿಂದ ಏಕಾಗ್ರತೆ ಮತ್ತು ಜ್ಞಾನ ವೃದ್ಧಿಯಾಗುತ್ತದೆ. ನಿರಂತರವಾಗಿ ಕ್ರೀಡೆಯಲ್ಲಿ ತೊಡಗುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ವಿದ್ಯಾರ್ಥಿಗಳು ಸದೃಢರಾಗಿರುತ್ತಾರೆ ಎಂದು ಹೇಳಿದರು. ಜೆಎಸ್‌ಎಸ್ ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕ ಶಿವನಾಂಕಾರಪ್ಪ, ಮಹದೇವಸ್ವಾಮಿ, ಮಧು, ಸಂಧ್ಯಾ, ಉಷಾ, ಇನಾಯತ್, ದೈಹಿಕ ಶಿಕ್ಷಣ ಶಿಕ್ಷಕ ಮಂಜು, ಸೋಮಶೇಖರ್ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net