ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಸಾಮಾನ್ಯ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳ ಪಾಲಕರ ಆದಾಯಮಿತಿ ಪ್ರವರ್ಗ-1, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ 2.50 ಲಕ್ಷ ರೂ.ಗಳು ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ವರ್ಗಗಳ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಗಳ ಒಳಗಿರಬೇಕು. ವಿದ್ಯಾರ್ಥಿಗಳು ವೆಬ್‌ಸೈಟ್ಮೂ ಲಕ ಸೆ.4ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮೂಲಕ ಅಥವಾ ಜಿಲ್ಲಾ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net