ಅಪ್ರಾಪ್ತೆಗೆ ಲೈಂಗಿಕ ಕಿರುಕುಳ

Crime Logo
Published on

ಚಾಮರಾಜನಗರ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಇಬ್ಬರ ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.

ತಾಲೂಕಿನ ಹೆಗ್ಗೋಠಾರ ಗ್ರಾಮದ ನಿವಾಸಿಗಳಾದ ನಟರಾಜು(30) ಹಾಗೂ ಅಪ್ಪು (25) ಅದೇ ಗ್ರಾಮದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಲಕಿಯ ಪಾಲಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ನೀಡಿದ್ದಾರೆ.

ನಟರಾಜು ಹಲವಾರು ದಿನಗಳಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿ ಮಾಡುತ್ತೇನೆ ಎಂದು ಕಿರುಕುಳ ನೀಡುತ್ತಿದ್ದ. ಈ ಕುರಿತು ನಟರಾಜುಗೆ ಬಾಲಕಿಯ ಪಾಲಕರು ತಿಳಿ ಹೇಳಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಸೋಮವಾರ ಗ್ರಾಮದ ಕ್ಯಾತನಕಟ್ಟೆಯ ತಿಪ್ಪೇಮಾಳದ ಬಳಿ ಅಪ್ರಾಪ್ತ ಬಾಲಕಿ ಸಹೋದರಿಯ ಜತೆಗೆ ಬಹಿರ್ದೆಸೆಗೆ ತೆರಳಿದ್ದಾಗ ಆರೋಪಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಮನೆಯವರ ಮೇಲೆ ನಟರಾಜು ಹಾಗೂ ಸಹೋದರ ಅಪ್ಪು ಗಲಾಟೆ ಮಾಡಿದ್ದು, ಬಾಲಕಿ ಮತ್ತು ಪಾಲಕರಿಗೆ ಗಲಾಟೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net