

ಚಾಮರಾಜನನಗರ: ಶ್ರೀಹರಳುಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ನಿರಂತರ ಜ್ಯೋತಿಯನ್ನು ಕಲ್ಪಿಸಿಕೊಡಬೇಕು ಎಂಬ ಮನವಿಯ ಹಿನ್ನೆಲೆಯಲ್ಲಿ ಚೆಸ್ಕಾಂ ಸಿಬ್ಬಂದಿ ಶುಕ್ರವಾರ ಸಂಜೆ ನಿರಂತರ ಜ್ಯೋತಿ ಸಂಪರ್ಕ ನೀಡಿದರು.
ನಗರದ ರಾಮಸಮುದ್ರ ಬಡಾವಣೆಯ ಸಮೀಪದಲ್ಲಿರುವ ಶ್ರೀ ಹರಳುಕೋಟೆ ಆಂಜನೇಯಸ್ವಾಮಿ ಮತ್ತು ಜನಾರ್ಧನಸ್ವಾಮಿ ದೇವಸ್ಥಾನಕ್ಕೆ ನಿರಂತರ ಜ್ಯೋತಿಯನ್ನು ಕಲ್ಪಿಸಿ ಕೊಡಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಭಕ್ತರು ಮತ್ತು ಸಾರ್ವಜನಿಕರು ಸಾಕಷ್ಟು ಬಾರಿ ಮನವಿ ಮಾಡಿದ್ದರು.
ಈ ಹಿನ್ನಲೆಯಲ್ಲಿ ಮುಖ್ಯ ಇಂಜಿನಿಯರ್ ಮಹಾದೇವಸ್ವಾಮಿ ಪ್ರಸನ್ನ ಮಾರ್ಗದರ್ಶನದಲ್ಲಿ ಶಾಖಾಧಿಕಾರಿಗಳಾದ ಚಂದ್ರನಾಯಕ, ಮಂಜುನಾಥ್ ಮತ್ತು ಸಿಬ್ಬಂದಿಗಳು ವಿದ್ಯುತ್ ಸಂಪರ್ಕ ಕಲ್ಪಿಸಿದರು. ಈ ಸಂದರ್ಭದಲ್ಲಿ ಲೆಕ್ಕಾಧಿಕಾರಿ ಮತ್ತು ನೌಕರರ ಸಂಘದ ಉಪಾಧ್ಯಕ್ಷ ಎನ್.ಮಹೇಶ್ ಉಪಸ್ಥಿತರಿದ್ದರು.