ಶ್ರೀ ಶಂಕರೇಶ್ವರಸ್ವಾಮಿ ಬೆಟ್ಟದಲ್ಲಿ ವಿಶೇಷ ಪೂಜೆ

17raju1
Published on

ಚಾಮರಾಜನಗರ: ಭೀಮನ ಅಮಾವಾಸ್ಯೆ ಪ್ರಯುಕ್ತ ಶ್ರೀಶಂಕರೇಶ್ವರ ಬೆಟ್ಟದಲ್ಲಿ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ತಾಲೂಕಿನ ಯಡಿಯೂರು, ಮಂಗಲ ಗ್ರಾಮದ ಸಮೀಪದಲ್ಲಿರುವ ಶ್ರೀಶಂಕರೇಶ್ವರಸ್ವಾಮಿ ಬೆಟ್ಟದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ಬೆಳಿಗ್ಗೆ 5 ಗಂಟೆಗೆ ಶ್ರೀವಿನಾಯಕ ಹಾಗೂ ಶ್ರೀ ಶಂಕರೇಶ್ವರಸ್ವಾಮಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ದೇವಸ್ಥಾನದ ಸುತ್ತಲೂ ಹುಲಿವಾಹನ ಉತ್ಸವವನ್ನು ನೆರವೇರಿಸಲಾಯಿತು.

ಶ್ರೀಶಂಕರೇಶ್ವರಸ್ವಾಮಿ ಪೂಜಾಮಹೋತ್ಸವದ ಅಂಗವಾಗಿ ಮಂಗಲ, ಯಡಿಯೂರು, ಮಹಂತಾಳಪುರ, ಹುಲ್ಲೇಪುರ, ಕರಡಿಮೋಳೆ, ಹೊಸೂರು ಹಾಗೂ ಇನ್ನಿತರೆ ಗ್ರಾಮಗಳ ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ, ದೇವರ ಕೃಪೆಗೆ ಪಾತ್ರವಾದರು.

ಶ್ರೀಶಂಕರೇಶ್ವರಸ್ವಾಮಿ ಪೂಜಾ ಮಹೋತ್ಸವದ ಅಂಗವಾಗಿ ನೆರೆದ ಭಕ್ತಾಧಿಗಳಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net