ಸಂಘಸಂಸ್ಥೆಗಳ ಸಮಾಜಮುಖಿ ಕಾರ್ಯ ಶ್ಲಾಘನೀಯ

18rajesh3
Published on

ಚಾಮರಾಜನಗರ: ಸಮಾಜದ ಹಿತದೃಷ್ಟಿಯಿಂದ ಸಂಘಸಂಸ್ಥೆಗಳು ಹಮ್ಮಿಕೊಳ್ಳುವ ಸಮಾಜಮುಖಿ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಿದೆ ಎಂದು ಕನಿಷ್ಠ ವೇತನ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಚಾಮರಾಜನಗರ ತಾಲೂಕು ಕುರುಬರ ಸಂಘದ ಅಧ್ಯಕ್ಷ ಉಮೇಶ್ ಶ್ಲಾಸಿದರು.

ತಾಲೂಕಿನ ಮುತ್ತಿಗೆ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 77 ನೇ ಹುಟ್ಟುಹಬ್ಬ ಹಾಗೂ 78 ನೇ ಸ್ವಾತಂತ್ರೋತ್ಸವದ ಅಂಗವಾಗಿ ಆತ್ಮತೃಪ್ತಿ ಟ್ರಸ್ಟ್ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಆರೋಗ್ಯ ತಪಾಸಣೆ ಶಿಬಿರ, ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ, ಶಾಲಾಮಕ್ಕಳಿಗೆ ಕಲಿಕಾಸಾಮಾಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಘಸಂಸ್ಥೆಗಳು ಶಾಲಾವಿದಾರ್ಥಿಗಳಿಗೆ ಕಲಿಕಾಪರಿಕರವಿತರಣೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ತಪಾಸಣೆ ಹಮ್ಮಿಕೊಂಡಿರುವುದು ಉತ್ತಮ ನಡೆಯಾಗಿದೆ. ಸಂಘಸಂಸ್ಥೆಗಳು ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜನೆ ಮಾಡುವ ಮೂಲಕ ಸಾಮಾನ್ಯ ಜನರಿಗೆ ಸಹಕಾರಿಯಾಗಬೇಕು ಎಂದರು.

ಮುಖಂಡರಾದ ಬದನಗುಪ್ಪೆ ಬಿ.ಪಿ.ನಾಗರಾಜಮೂರ್ತಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ 40ವರ್ಷದ ರಾಜಕಾರಣದಲ್ಲಿ ಯಾವುದೇ ಕಪ್ಪುಚುಕ್ಕೆಯಿಲ್ಲದೇ ರಾಜಕಾರಣ ಮಾಡಿಕೊಂಡುಬಂದಿದ್ದಾರೆ. 2013ರಿಂದ 2018ರವರಗೆ ಉತ್ತಮ ಜನಪರ ಆಡಳಿತ ನೀಡಿದ್ದಾರೆ. ಎರಡನೇ ಅವಧಿಯಲ್ಲೂ ಜನಪರ ಕಾರ್ಯಕ್ರಮ ನೀಡಿದ್ದಾರೆ. ಇವರ ರಾಜಕೀಯ ಏಳಿಗೆ ಸಹಿಸದ ವಿರೋಧಪಕ್ಷದವರು ಸಿದ್ದರಾಮಯ್ಯ ಅವರ ಕಾಲೆಳೆಯಲು ಮುಂದಾಗಿದ್ದಾರೆ. ಎಂದಿಗೂ ಅವರ ಪ್ರಯತ್ನಫಲಿಸುವುದಿಲ್ಲ ಎಂದರು.

ಆತ್ಮತೃಪ್ತಿ ಟಸ್ಟ್ ಕಾರ್ಯದರ್ಶಿ ಪ್ರಿಯದರ್ಶಿನಿ ಮಾತನಾಡಿ, ನಮ್ಮ ಟ್ರಸ್ಟ್ ವತಿಯಿಂದ ಹಲವಾರು ವರ್ಷಗಳಿಂದ ಆರೋಗ್ಯ ತಪಾಸಣೆ ಶಿಬಿರ, ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಸೇರಿದಂತೆ ಇನ್ನಿತರೆ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಹೆಗ್ಗೋಠಾರ ಗ್ರಾಪಂ ಅಧ್ಯಕ್ಷೆ ಅಂಬಿಕಾ, ಬದನಗುಪ್ಪೆ ಗ್ರಾ.ಪಂ ಅಧ್ಯಕ್ಷ ಕುಮಾರ್, ಉಪಾಧ್ಯಕ್ಷೆ ಗೌರಮ್ಮ, ಎಪಿಎಂಸಿ ಸದಸ್ಯ ಗುರುಸ್ವಾಮಿ, ಗ್ರಾ,ಪಂ ಸದಸ್ಯರಾದ ನಾಗನಾಯಕ, ರಮೇಶ್, ಕುಮಾರ್, ಸುರೇಶ್, ಡಾ,ರೇಣುಕಾದೇವಿ, ತಾಲೂಕು ಕುರುಬರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಮುಖಂಡರಾದ ಚಿನ್ನಸ್ವಾಮಿ, ಮಂಜು, ಮುತ್ತಿಗೆ ದೂರೆ, ವೀರತ್ತೇಗೌಡ, ಮಹಾಲಿಂಗೇಗೌಡ, ಮಂಜಣ್ಣ, ಹಳೇಪುರಮಂಜು, ಡಾ,ಪ್ರವೀಣ್, ಮಹೇಶ್‌ಗೌಡ, ಶಿವಕುಮಾರ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net