ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅಪಾರ

18rajesh6
Published on

ಚಾಮರಾಜನಗರ: ದೇಶದಲ್ಲಿ ಯುವಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು, ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವಕರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಆರ್.ಸುಮತಿ ತಿಳಿಸಿದರು.

ನಗರದ ಜೋಡಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ, ಶ್ರೀವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಸಹಯೋಗದಲ್ಲಿ ಸ್ವಾತಂತ್ರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಹರ್‌ಘರ್ ತಿರಂಗ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಯುವಕ-ಯುವತಿಯರು ಪ್ರತಿ ರಾಷ್ಟ್ರದ ಶಕ್ತಿ ಯಾಗಿರುತ್ತಾರೆ. ಯುವಶಕ್ತಿ ದೇಶದ ಅಭಿವೃದ್ಧಿಯಲ್ಲಿ ಪ್ರಮುಖಪಾತ್ರವನ್ನು ವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮವಾದ ಶಿಕ್ಷಣವನ್ನು ಪಡೆದುಕೊಂಡು ತಮ್ಮಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳುವ ಜತೆಗೆ ದೇಶದ ಅಭಿವೃದ್ಧಿಗೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.

ಶ್ರೀವರಮಹಾಲಕ್ಷ್ಮಿ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ಅಧ್ಯಕ್ಷ ಜಿ.ಬಂಗಾರು ಮಾತನಾಡಿ, ವಿದ್ಯಾರ್ಥಿಗಳು ಈದೇಶದ ಸಂಪತ್ತು. ಈ ದೃಷ್ಟಿಯಲ್ಲಿ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸ ಕಲಿತು ಉನ್ನತ ಮಟ್ಟದ ಅಧಿಕಾರಿಗಳಾಗಿ ದೇಶಸೇವೆ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಸಹನಾ, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಎಂ.ಆರ್.ಬಾಲಸುಬ್ರಹ್ಮಣ್ಯಂ, ಡಾ.ಬಿ.ಆರ್.ಜಯಣ್ಣ, ಪಿ.ಶೈಲೇಶ್ ಕುಮಾರ್, ಸಿದ್ದರಾಜು, ದೀಪಾ, ಪ್ರಭಾವತಿ, ಸಾಕಮ್ಮ, ಯೋಗೇಶ್, ಮಹಾದೇವಸ್ವಾಮಿ, ಸುವರ್ಣಮ್ಮ, ರಾಜಪ್ಪ, ರುಕ್ಮಿಣಿ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net