

ಚಾಮರಾಜನಗರ: ಕಲಿಕೆಯ ಮತ್ತು ಜ್ಞಾನದ ಪ್ರಗತಿಯನ್ನು ಉತ್ತೇಜಿಸುವ ಉತ್ತಮ ಮೂಲವಾಗಿದೆ ಎಂದು ನಗರಸಭಾ ಸದಸ್ಯ ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ಎಸ್.ಆರ್.ರಂಗನಾಥನ್ ಜನ್ಮದಿನದ ಅಂಗವಾಗಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಂಥಾಲಯಗಳು ಅರಿವಿನ ಜ್ಞಾನದೀವಿಗೆಯಾಗಿದೆ. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಪನ್ನು ನೀಡುವ ಅಕ್ಷಯ ಭಂಡಾರವಾಗಿದೆ. ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ದೊರೆಯುವ ಸೇವೆಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣವನ್ನು ಪಡೆಯಬೇಕು. ಗ್ರಂಥಾಲಯಗಳು ಕಲಿಕೆಯ ಮತ್ತು ಜ್ಞಾನದ ಪ್ರಗತಿಯನ್ನು ಉತ್ತೇಜಿಸುವ ಉತ್ತಮ ಮೂಲವಾಗಿದೆ. ಓದುವ ಮತ್ತು ಸಂಶೋಧನೆ ಮಾಡುವ ಮೂಲಕ ಗ್ರಂಥಾಲಯಗಳಲ್ಲಿ ತಮ್ಮ ಬಿಡುವಿನ ವೇಳೆಯನ್ನು ಉತ್ತಮ ರೀರಿಯಲ್ಲಿ ಕಳೆಯಬಹುದಾಗಿದೆ. ಪ್ರತಿಯೊಬ್ಬರು ದಿನ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಗ್ರಂಥಪಾಲಕರ ದಿನಾಚರಣೆಯ ಅಂಗವಾಗಿ ವಿವಿಧ ಶಾಲೆಗಳಲ್ಲಿ ಗ್ರಂಥಾಲಯದ ಮಹತ್ವದ ಕುರಿತು ಏರ್ಪಡಿಸಲಾಗಿದ್ದ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಶಿವಸ್ವಾಮಿ , ಬಿಐಇಆರ್‌ಟಿ ರೆಬೆಲ್ಲೋ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಬಿಆರ್‌ಸಿ ರಮೇಶ್, ರಂಗಸ್ವಾಮಿ ಹಾಗೂ ಇತರರು ಹಾಜರಿದ್ದರು.