ಬಗರ್‌ಹುಕುಂ ಸಾಗುವಳಿ ಮಂಜೂರಾತಿಗೆ ಮನವಿ

20rajesh2
Published on

ಚಾಮರಾಜನಗರ: ಬಗರ್‌ಹುಕುಂ ಸಾಗುವಳಿ ಮಂಜೂರಾತಿ ಮಾಡಿಸಿಕೊಡುವಂತೆ ತಾಲೂಕಿನ ಅರಕಲವಾಡಿ ಗ್ರಾಮಸ್ಥರು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಗ್ರಾಮಸ್ಥರು, ತಾಲೂಕಿನ ಹರದನಹಳ್ಳಿ ಹೋಬಳಿ, ಅರಕಲವಾಡಿ ಮತ್ತು ಮಂಚಗುಂಡಿಪುರ ಗ್ರಾಮದಲ್ಲಿ ವಾಸವಾಗಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಕೃಷಿ ಕಾರ್ಮಿಕರು ಸರ್ವೆ ನಂ.45 ರಲ್ಲಿ ತಲಾ 2, 3, ಎಕರೆಯಂತೆ ಸುಮಾರು 30-40 ವರ್ಷಗಳಿಂದ ಬಗರ್ ಹುಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದೇವೆ. ಇದೇ ಜಮೀನಿನಲ್ಲಿ ಬೆಳೆ ಬೆಳೆದು ಜೀವನ ಸಾಗಿಸಿಕೊಂಡು ಬರುತ್ತಿದ್ದೇವೆ. ಈ ನಿಟ್ಟಿನಲ್ಲಿ ಬಗರ್ ಹುಕುಂ ಜಮೀನುಗಳನ್ನು ಸಕ್ರಮಗೊಳಿಸಿ ಸಾಗುವಳಿ ಮಂಜೂರು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಗ್ರಾ.ಪಂ.ಮಾಜಿ ಅಧ್ಯಕ್ಷ ರಾಮಯ್ಯ, ಮುಖಂಡರಾದ ಚಿಕ್ಕಬಸವಯ್ಯ, ಚಿಕ್ಕಗೋಪಮ್ಮ, ಬೆಳ್ಳಮ್ಮ, ಉತ್ತರಮ್ಮ, ಗೋಪಮ್ಮ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net