ಬಡತನ ನಿರ್ಮೂಲನೆಗೆ ಶ್ರಮಿಸಿದ್ದ ದೇವರಾಜ ಅರಸು

20rajesh6
Published on

ಚಾಮರಾಜನಗರ: ರಾಜ್ಯದಲ್ಲಿ 20 ಅಂಶಗಳ ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಬಡತನ ನಿರ್ಮಾಲನೆಗೆ ಶ್ರಮಿಸಿದ್ದರು ಎಂದು ಎಂಎಸ್‌ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿಪ್ರಧಾನಿ ದಿ.ರಾಜೀವ್‌ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ.ದೇವರಾಜಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಾಜಿ ಪ್ರಧಾನಿ ರಾಜೀವ್‌ಗಾಂಧಿ ದೇಶದ ಪ್ರಗತಿಗೆ ಹಲವಾರು ಕೂಡುಗೆಗಳನ್ನು ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ದಿ.ದೇವರಾಜಅರಸು ರಾಜ್ಯದಲ್ಲಿ ಸುದೀರ್ಘ 8 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತವನ್ನು ನೀಡಿದ್ದರು. ಅಲ್ಪ ಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗಗಳು ಮತ್ತು ಶೋಷಿತರಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ನೆಲೆ ಕಲ್ಪಿಸಲು ಭದ್ರಬುನಾದಿ ಹಾಕಿದ ಕೀರ್ತಿ ಅರಸು ಅವರಿಗೆ ಸಲುತ್ತದೆ ಎಂದರು.

ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ದೇವರಾಜು ಅರಸು ಅವರು ದಲಿತರು ಶೋಷಿತರು, ಹಿಂದುಳಿದವನ್ನು ರಾಜಕೀಯವಾಗಿ ಮುಂದೆ ತರಲು ಸಾಕಷ್ಟು ಶ್ರಮಿಸಿದರು. ಮಾಜಿಪ್ರಧಾನಿ ದಿ. ರಾಜೀವ್‌ಗಾಂಧಿ ತಂತ್ರಜ್ಞಾನಕ್ಕೆ ಹೆಚ್ಚು ಒತ್ತು ನೀಡಿದರು. ಇಂತಹ ಮಹಾನ್ ವ್ಯಕ್ತಿಗಳ ಜೀವನ ಆದರ್ಶಗಳನ್ನು ಮೈಗೂಡಿಸಿಕೂಂಡು ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್(ಮುನ್ನ), ಕೆಪಿಸಿಸಿ ಸದಸ್ಯ ಸಯ್ಯದ್ ರಫಿ, ನಗರಸಭೆ ಸದಸ್ಯರಾದ ಚಿನ್ನಮ್ಮ, ನೀಲಮ್ಮ. ಎಪಿಎಂಸಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯ ಎ.ಎಸ್.ಪ್ರದೀಪ್, ಕಾಗಲವಾಡಿ ಚಂದ್ರು, ಎಸ್ಸಿಘಟಕದ ಮರಿಯಾಲದ ಹುಂಡಿಕುಮಾರ್, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಮೋಹನ್, ಮುತ್ತುರಾಜ್, ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷ ಸ್ವಾಮಿ, ತಾಪಂ ಮಾಜಿಸದಸ್ಯ ಎಚ್.ಎಂ.ಮಹದೇವಶೆಟ್ಟಿ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net