ಡಿ.ದೇವರಾಜ ಅರಸು ಅಪರೂಪದ ರಾಜಕಾರಣಿ

20rajesh7
Published on

ಚಾಮರಾಜನಗರ: ಸಾಮಾಜಿಕ ಸಮಾನತೆಯ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ಮತ್ತು ಶೋಷಿತ ಸಮುದಾಯದವರಿಗೆ ಜಾರಿಗೊಳಿಸಿರುವ ಮಹತ್ವಪೂರ್ಣ ಯೋಜನೆಗಳು ಎಲ್ಲರಿಗೂ ಸ್ಪೂರ್ತಿದಾಯಕವಾಗಿದ್ದು, ಅವರೊಬ್ಬ ಅಪರೂಪದ ರಾಜಕಾರಣಿಯಾಗಿದ್ದರು ಎಂದು ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಪಿ.ಲಿಂಗರಾಜು ಹೇಳಿದರು.

ನಗರದ 25ನೇ ವಾರ್ಡ್‌ನ ಚೆನ್ನೀಪುರದಮೋಳೆಯಲ್ಲಿರುವ ಶ್ರೀಭಗೀರಥ ಫೌಂಡೇಶನ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸು ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೇವರಾಜ್ ಅರಸ್ ಅವರು ರಾಜ್ಯದ ಆರ್ಥಿಕ ವ್ಯವಸ್ಥೆಗೆ ಒಂದು ಹೊಸ ದಿಕ್ಕನ್ನು ನೀಡಲು ಯೋಜನೆಗಳನ್ನು ರೂಪಿಸಿ ಅವುಗಳನ್ನು ಅನುಷ್ಠಾನಕ್ಕೆ ತಂದರು. ಅವುಗಳಲ್ಲಿ ಬಡತನ ನಿರ್ಮೂಲನಾ ಯೋಜನೆ, ಕಿರು ಮತ್ತು ಮಧ್ಯಮ ಗಾತ್ರದ ನೀರಾವರಿ ಯೋಜನೆಗಳು, ಒಣಭೂಮಿ ಬೇಸಾಯಕ್ಕೆ ಪ್ರೋತ್ಸಾಹ ನೀಡಿದ್ದರು.

ಕಾರ್ಯಕ್ರಮದಲ್ಲಿ ಶ್ರೀಭಗೀರಥ ಫೌಂಡೇಶನ್ ವಕೀಲರಾದ ಲೋಕೇಶ್, ಗ್ರಾ.ಪಂ.ಮಾಜಿ ಅಧ್ಯಕ್ಷ ನಾಗರಾಜು, ಮುಖಂಡರಾದ ಸಿ.ಬಿ.ನಾಗರಾಜು, ದೊಡ್ಡಮೋಳೆ ನಾಗರಾಜು, ಕೋರಿಯರ್ ಮಹದೇವಸ್ವಾಮಿ, ರಾಚಶೆಟ್ಟಿ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net