ಅಪಘಾತದಲ್ಲಿ ನಾಲ್ವರು ಪ್ರಯಾಣಿಕರಿಗೆ ಗಾಯ

accident-15
Published on

ಚಾಮರಾಜನಗರ: ಮೈಸೂರು-ಚಾಮರಾಜನಗರ ಮುಖ್ಯ ರಸ್ತೆಯಲ್ಲಿ ಲಾರಿ ಹಾಗೂ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಾಲೂಕಿನ ಬೇಡರಪುರ ಇಂಜಿನಿಯರಿಂಗ್ ಕಾಲೇಜಿನ ಸಮೀಪ ಮೈಸೂರಿನಿಂದ ಚಾಮರಾಜನಗರಕ್ಕೆ ಬರುತ್ತಿದ್ದ ಬಸ್ ಮತ್ತು ಮೈಸೂರಿಗೆ ತೆರಳುತ್ತಿದ್ದ ಗೂಡ್ಸ್ ಲಾರಿ ನಡುವೆ ಸೋಮವಾರ ಅಪಘಾತವಾಗಿದೆ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 4 ಜನ ಪ್ರಯಾಣಿರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಆಗಮಿಸಿದ ಸಂಚಾರ ಠಾಣೆ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿದರು.

ಕೆಲಕಾಲ ಮೈಸೂರು-ಚಾಮರಾಜನಗರ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಬಳಿಕ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net