ಜಾನುವಾರು ಸಾಗಣೆ ಆರೋಪಿಗಳ ಬಂಧನ

Crime Logo
Published on

ಚಾಮರಾಜನಗರ: ತಾಲೂಕಿನ ಕಾವುದವಾಡಿ ಗೇಟ್ ಬಳಿ ಸಂತೇಮರಹಳ್ಳಿ ಕಡೆಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಗಳು ಸುಮಾರು 50 ಸಾವಿರ ರೂ. ಮೌಲ್ಯದ ಎಮ್ಮೆಗಳನ್ನು ಗೂಡ್ಸ್ ವಾಹನದಲ್ಲಿ ತಮಿಳುನಾಡಿನ ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net