ಚಾಮರಾಜನಗರ: ಜಿಲ್ಲಾ ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದಿಂದ 2023- 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆ.24ರಂದು ಹಮ್ಮಿಕೊಳ್ಳಲಾಗಿದೆ.
ಕರಿನಂಜನಪುರ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ, ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಶಿಕ್ಷಕರ ನೌಕರರ ಜಾಗೃತಿ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಪರಿಶಿಷ್ಟ ಜಾತಿ ಶಿಕ್ಷಕರ ಕ್ಷೇಮಾಭಿವೃದ್ಧಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ರಾಮಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.