ಗಣೇಶ ಪ್ರತಿಷ್ಠಾಪನೆ ಏಕಗವಾಕ್ಷಿ ಸಮಿತಿಯ ಅನುಮತಿ ಕಡ್ಡಾಯ

mbd_Ganesha
Published on

ಚಾಮರಾಜನಗರ: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಗಣೇಶ ಪ್ರತಿಷ್ಠಾಪನೆ, ಕಾರ್ಯಕ್ರಮಗಳ ಆಯೋಜನೆಗೆ ಪರವಾನಗಿ ನೀಡಲು ತಾಲೂಕು ಮಟ್ಟದಲ್ಲಿ ಏಕಗವಾಕ್ಷಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯಿಂದ ಅನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ಕಂದಾಯ ಇಲಾಖೆಯ ತಹಸೀಲ್ದಾರ್ ಅವರು ಸಮಿತಿಯ ಅಧ್ಯಕ್ಷರಾಗಿದ್ದು, ಸಂಬಂಧಪಟ್ಟ ನಗರಸಭೆ, ಪೌರಾಯುಕ್ತರು, ಪುರಸಭೆ, ಪಟ್ಟಣ ಪಂಚಾಯಿತಿ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಗಳಾಗಿರುತ್ತಾರೆ. ತಾಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ವೃತ್ತ ನಿರೀಕ್ಷಕರು, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರು, ಚೆಸ್ಕಾಂನ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಾಲ್ಲೂಕು ಅಗ್ನಿಶಾಮಕ ಠಾಣಾಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ.

ಗಣಪತಿ ಪ್ರತಿಷ್ಠಾಪನೆ, ಕಾರ್ಯಕ್ರಮಗಳ ಆಯೋಜನೆ ಮಾಡುವ ಆಯೋಜಕರು ಆಯಾ ತಾಲೂಕು ವ್ಯಾಪ್ತಿಯಲ್ಲಿ ತಾಲೂಕು ಕಚೇರಿ ಅಥವಾ ಪೊಲೀಸ್ ಠಾಣೆಯಲ್ಲಿ ನಿಗದಿತ ನಮೂನೆಯನ್ನು ಪಡೆದು ಸದರಿ ಸಮಿತಿಯಿಂದ ಅನುಮತಿ ಪಡೆಯಬೇಕು. ಹೆಚ್ಚಿನ ಮಾಹಿತಿಗಾಗಿ ಚಾಮರಾಜನಗರ ತಾಲೂಕು ದೂ.ಸಂ 08226-200254, ಗುಂಡ್ಲುಪೇಟೆ ತಾಲೂಕು ದೂ.ಸಂ 08229-222225, ಯಳಂದೂರು ತಾಲೂಕು ದೂ.ಸಂ 08226-240029, ಕೊಳ್ಳೇಗಾಲ ತಾಲೂಕು ದೂ.ಸಂ 08224-252329, ಹನೂರು ತಾಲೂಕು ದೂ.ಸಂ 08224-268032 ಹಾಗೂ ವಾಟ್ಸಾ ಪ್ ಸಂಖ್ಯೆ 9740942901 ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net