ಕಬ್ಬಳ್ಳಿಯಲ್ಲಿ ಗ್ರಾಮೀಣ ಕೃಷಿ ಅಧ್ಯಯನ

23rajesh4
Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಕಬ್ಬಳ್ಳಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸಹಭಾಗಿತ್ವ ಅಧ್ಯಯನ ಕಾರ್ಯಕ್ರಮಕ್ಕೆ ಗುರುಸಿದ್ಧ ಮಹಾಸ್ವಾಮೀಜಿ ಚಾಲನೆ ನೀಡಿದರು.

ಕೃಷಿ ಮಹಾವಿದ್ಯಾಲಯವು ಗ್ರಾಮೀಣ ಕೃಷಿ ಕಾರ್ಯಾನುಭವದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಗುರುಸಿದ್ಧ ಮಹಾಸ್ವಾಮಿಗಳು ಸಿರಿಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಬಳಿಕ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಗ್ರಾಮದ ಚಿತ್ರಣವನ್ನು ನಕ್ಷೆಯ ಮೂಲಕ ವಿವರಿಸಿದರು. ಶಿಬಿರದ ಸಂಯೋಜಕ ಡಾ.ಜಿ.ನಾಗೇಶ್, ಸಹ ಸಂಯೋಜಕ ಡಾ.ಎನ್ ಉಮಾಶಂಕರ್ ಕುಮಾರ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net