27ರಂದು ಹಡಪದ ಅಪ್ಪಣ ಜಯಂತಿ

Published on

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆ.27ರಂದು ನಗರದಲ್ಲಿ ಶಿವಶರಣ ಶ್ರೀ ಹಡಪದ ಅಪ್ಪಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಪ್ರವಾಸಿ ಮಂದಿರ ಆವರಣದಲ್ಲಿ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಿಗಿಯ ಹಡಪದ ಅಪ್ಪಣ ದೇವರ ಮಹಾಸಂಸ್ಥಾನ ಮಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಅಧ್ಯಕ್ಷರೂ ಆದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಉಪಸ್ಥಿತಿ ವಹಿಸುವರು.

ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್‌ಪ್ರಸಾದ್, ಎಂ.ಆರ್.ಮಂಜುನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ.ಮಾದೇಗೌಡ, ಕೆ.ವಿವೇಕಾನಂದ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ, ಮೈಸೂರು ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮರಾಜನಗರ ಮತ್ತು ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ (ಮುನ್ನ), ನಗರಸಭೆ ಸದಸ್ಯ ಎಚ್.ಎಸ್.ಮಮತಾ ಭಾಗವಹಿಸುವರು. ಯಳಂದೂರಿನ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ಶಿಕ್ಷಕರಾದ ಗುಂಬಳ್ಳಿ ಬಸವರಾಜ್ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net