ಶ್ರೀಗಳಿಗೆ ಭಾರತ ರತ್ನ ನೀಡಲಿ

25rajesh4
Published on

ಚಾಮರಾಜನಗರ: ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮೀಜಿಯ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕು ಎಂದು ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು.

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕರ್ನಾಟಕ ಸೇನಾ ಪಡೆಯಿಂದ ಭಾನುವಾರ ಆಯೋಜಿಸಿದ್ದ ಶ್ರೀಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 109ನೇ ಜಯಂತಿ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಸ್ವಾಮೀಜಿ ಶಿಕ್ಷಣ, ಆರೋಗ್ಯ, ದಾಸೋಹ, ಧರ್ಮ ಜಾಗೃತಿ, ಅಧ್ಯಾತ್ಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು. ಜೆಎಸ್‌ಎಸ್ ಮಹಾವಿದ್ಯಾಪೀಠವನ್ನು ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣ ನೀಡುವ ಮಹತ್ಕಾರ್ಯ ಮಾಡಿದ್ದಾರೆ. ರಾಜ್ಯ ಅಲ್ಲದೆ ಹೊರರಾಜ್ಯ, ವಿದೇಶಗಳಲ್ಲೂ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದಾರೆ. ಲಕ್ಷಾಂತರ ಮಕ್ಕಳು ಶಿಕ್ಷಣವಂತರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶ, ವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಶಾ.ಮುರಳಿ, ನಿಜಧ್ವನಿ ಗೋವಿಂದರಾಜು, ಚಾ.ರಾ.ಕುಮಾರ್, ಆಟೋ ಲಿಂಗರಾಜು, ನಾಗೇಶ್, ಸ್ವಾಮಿ, ಬಸವಣ್ಣ, ರವಿಚಂದ್ರಪ್ರಸಾದ್, ನಂಜುಂಡಶೆಟ್ಟಿ, ತಾಂಡವಮೂರ್ತಿ, ಕಾಂತರಾಜ್, ನಾರಾಯಣ್, ಆರಾಧ್ಯ, ದತ್ತ, ರಮೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net